BEL recruitment – BEL ನೇಮಕಾತಿ 2022
BEL recruitment – BEL ನೇಮಕಾತಿ 2022 ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಬಿಇಎಲ್ ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯ ಬಗ್ಗೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡುತ್ತೇವೆ. ಸಂಸ್ಥೆಯು 41 ಹುದ್ದೆಗಳಿಗೆ ನೇಮಕಾತಿಯನ್ನು ಆರಂಭ ಮಾಡಿದೆ. ಸಂಸ್ಥೆಯು 41 ಪ್ರಾಜೆಕ್ಟ್ ಮತ್ತು ಟ್ರೈನಿಂಗ್ ನೇಮಕಾತಿಯನ್ನು ಆರಂಭ ಮಾಡಿದೆ. ಭಾರತದ ವಿವಿಧ ಸ್ಥಳಗಳಲ್ಲಿ ಕೇರಳ, ಮುಂಬೈ, ಮಹಾರಾಷ್ಟ್ರ, ಬೆಂಗಳೂರು, ಕರ್ನಾಟಕ, ಕೊಚ್ಚಿ, ಆಂಧ್ರಪ್ರದೇಶದ ವಿವಿಧ ಸ್ಥಳಗಳಲ್ಲಿ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಈ ಮೇಲೆ ನೀಡಲಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆಫ್ಲೈನ್ ಮೂಲಕ ತಮ್ಮ ಜೀವನ ಸಲ್ಲಿಸಬಹುದಾಗಿದೆ. ಈ ಅಧಿಸೂಚನೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ. ಆದ್ದರಿಂದ ಲೇಖನವನ್ನು ಕೊನೆಯವರೆಗೆ ಓದಿ. ನೀವೇನಾದರೂ ನಮ್ಮ ವೆಬ್ಸೈಟ್ ಗೆ ಮೊದಲ ಬಾರಿ ಬರುತ್ತಿದ್ದರೆ ನಮ್ಮ ಟೆಲಿಗ್ರಾಂ ಗ್ರೂಪನ್ನು ಜಾಯಿನ್ ಆಗಿ.
ನೇಮಕಾತಿಯ ಹುದ್ದೆಗಳ ವಿವರಗಳು
ಬಿಇಎಲ್ ಹಲವು ನೇಮಕಾತಿಯನ್ನು ಕರೆದಿದ್ದಾರೆ ಹುದ್ದೆಗಳ ವಿವರಗಳು ಈ ಕೆಳಗಿನಂತಿವೆ. ಪ್ರಾಜೆಕ್ಟ್ ಇಂಜಿನಿಯರ್ ಒಟ್ಟು 37 ಹುದ್ದೆಗಳು ಮತ್ತು ಟ್ರೈನಿಂಗ್ ಇಂಜಿನಿಯರ್ ಒಟ್ಟು ನಾಲ್ಕು ಹುದ್ದೆಗಳು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ತಮ್ಮ ಅರ್ಜಿಗಳನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದು.
ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ವಿವರಗಳು
ಬಿಇಎಲ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ ಮಾಹಿತಿಗಳು ಈ ಕೆಳಗಿನಂತಿವೆ. ಸಂಸ್ಥೆಯು ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬೀಟೆಕ್ ಶಿಕ್ಷಣ ಅಥವಾ ಪದವಿ ಶಿಕ್ಷಣ ಅಥವಾ ಬಿಇ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಈ ಮೇಲೆ ನೀಡಲಾದ ಶಿಕ್ಷಣವನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ತಮ್ಮ ಜೀವನ ಸಲ್ಲಿಸಲು ಅವಕಾಶ ಪಡೆಯುತ್ತಾರೆ.
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ ಇ ಅಥವಾ ಬಿ ಟೆಕ್ ಇನ್ ಕಂಪ್ಯೂಟರ್ ಸೈನ್ಸ್ ಅಥವಾ ಐಟಿ ಅಥವಾ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಅಥವಾ ಟೆಲಿ ಕಮ್ಯುನಿಕೇಷನ್ ಅಥವಾ ಎಲೆಕ್ಟ್ರಿಕಲ್ ಅಥವಾ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಶಿಕ್ಷಣವನ್ನು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪೂರ್ಣಗೊಳಿಸಿರಬೇಕು.
ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ ಟೆಕ್ ಇನ್ ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಾಂನಿಕೆಶನ್ ಶಿಕ್ಷಣವನ್ನು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.
ಬಿಇಎಲ್ ನೇಮಕಾತಿಯ ವೇತನದ ವಿವರಗಳು
ಅಧಿಕೃತ ಅಧಿಸೂಚನೆಯ ಪ್ರಕಾರ ವಿವಿಧ ಹುದ್ದೆಗಳಿಗೆ ವಿವಿಧ ರೀತಿಯ ವೇತನವನ್ನು ನೀಡಲಾಗುತ್ತದೆ. ಮೊದಲಿಗೆ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.40,000 ಇಂದ 55 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಇನ್ನು ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕನಿಷ್ಠ 30,000 ದಿಂದ ಗರಿಷ್ಠ 40,000 ದವರೆಗೆ ವೇತನವನ್ನು ನೀಡಲಾಗುತ್ತದೆ. ವೇತನದ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ಸೂಚನೆಯನ್ನು ಸರಿಯಾಗಿ ಓದಿ ಅಧಿಕೃತ ಅಧಿಸೂಚನೆಯನ್ನು ಕೊನೆಯಲ್ಲಿ ನೀಡಿದ್ದೇವೆ.
ಬಿಇಎಲ್ ನೇಮಕಾತಿಯ ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು
ಈ ಮೇಲೆ ನೀಡಲಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯನ್ನು ವಿಧಿಸಲಾಗಿದೆ. ಸಂಸ್ಥೆ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 32 ವರ್ಷ ಆಗಿರುತ್ತದೆ. ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 32 ಆಗಿರುತ್ತದೆ ಮತ್ತು ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 28 ಆಗಿರುತ್ತದೆ. ಈ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳು ಬಿಇಎಲ್ ಹೊಸ ನೇಮಕಾತಿಗೆ ತಮ್ಮರ್ಜಿಗಳನ್ನು ಸಲ್ಲಿಸಬಹುದು.
ವಯಸ್ಸಿನ ಮಿತಿ ಸಡಿಲಿಕೆ ಮಾಹಿತಿಗಳು : BEL recruitment – BEL ನೇಮಕಾತಿ 2022
ಅರ್ಜಿ ಸಲ್ಲಿಸುವ ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ವಯಸ್ಸಿನ ಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಇನ್ನು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ. ಇನ್ನು ಉಳಿದ ಅಭ್ಯರ್ಥಿಗಳಿಗೆ ಅಂದರೆ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ಕಲ್ಪಿಸಲಾಗಿದೆ.
Union Bank recruitment – ಯೂನಿಯನ್ ಬ್ಯಾಂಕ್ ನೇಮಕಾತಿ
ನೇಮಕಾತಿಯ ಅರ್ಜಿ ಶುಲ್ಕದ ವಿವರಗಳು
ವಿವಿಧ ರೀತಿಯ ಹುದ್ದೆಗಳಿಗೆ ವಿವಿಧ ರೀತಿಯ ಶುಲ್ಕವನ್ನು ವಿಧಿಸಲಾಗಿದೆ. ಮೊದಲಿಗೆ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಎಲ್ಲಾ ಅಭ್ಯರ್ಥಿಗಳಿಗೂ ಗರಿಷ್ಠ 400 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಎಸ್ಸಿ ಎಸ್ಟಿ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ವಿಧಿಸಲಾಗಿಲ್ಲ. ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು. ಇನ್ನು ಟ್ರೈನಿ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 150 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ್‌ಸಿ-ಎಸ್‌ಟಿ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಉಚಿತವಾಗಿ ತಮ್ಮ ಅರ್ಜಿ ನಮೂನೆಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರವಾಗಿ ಸಂದರ್ಶನವನ್ನು ನಡೆಸಲಾಗುತ್ತದೆ ನೇರ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಅಧಿಕೃತ ಅಧಿಸೂಚನೆಯ ಪ್ರಕಾರ ನೇಮಕಾತಿ ಮಾಡಲಾಗುತ್ತದೆ.
ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು
- ಈ ಮೇಲೆ ನೀಡಲಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಸಂಸ್ಥೆ ಬಿಡುಗಡೆ ಮಾಡಿದ ಹೊಸ ಅಧಿ ಸೂಚನೆಯನ್ನು ಕಾಣಬಹುದು.
- ನಂತರ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಪ್ರಾರಂಭದಿಂದ ಕೊನೆಯವರೆಗೆ ಓದಬೇಕು.
- ನಂತರ ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳನ್ನು ಮಾಡದೆ ಸಂಪೂರ್ಣವಾಗಿ ಭರ್ತಿ ಮಾಡಿ ತಮ್ಮ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗೆ ನೀಡಲಾದೆ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ
ಜನರಲ್ ಮ್ಯಾನೇಜರ್ ನೇವಲ್ ಸಿಸ್ಟಮ್ ಭಾರತ ಎಲೆಕ್ಟ್ರಾನಿಕ್ ಲಿಮಿಟೆಡ್ ಜಾಲಹಳ್ಳಿ ಪೋಸ್ಟ್ ಬೆಂಗಳೂರು ಕರ್ನಾಟಕ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿ
ಸಂಸ್ಥೆ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ ಆಫ್ಲೈನಲ್ಲಿ ಅರ್ಜಿ ಸಲ್ಲಿಕೆ ಆರಂಭ ಆಗುವ ದಿನಾಂಕ ಡಿಸೆಂಬರ್ 7 ಮತ್ತು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 22 ಆಗಿರುತ್ತದೆ. ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
Conclusion :
ಈ ಲೇಖನದಲ್ಲಿ ನಾವು ಬಿಇಎಲ್ ಸಂಸ್ಥೆ ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ ಈ ಲೇಖನ ನಿಮಿಗಿಷ್ಟವಾಗಿದೆ ಎಂದು ಭಾವಿಸುತ್ತೇವೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ.