Cochin shipyard recruitment – ಕೊಚ್ಚಿನ್ ಶಿಪಿಯಾರ್ಡ್ ನೇಮಕಾತಿ
Cochin shipyard recruitment – ಕೊಚ್ಚಿನ್ ಶಿಪಿಯಾರ್ಡ್ ನೇಮಕಾತಿ – ಕೊಚ್ಚಿನ್ ಶಿಪಿಯಾರ್ಡ್ ಲಿಮಿಟೆಡ್ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತವಾಗಿ ತನ್ನ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಒಟ್ಟು 54 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಕೊನೆಯ ದಿನಾಂಕ ಅಂದರೆ ಅಕ್ಟೋಬರ್ 7ರ ಒಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಕರ್ನಾಟಕ ಸ್ಥಳದಲ್ಲಿ ಯಾಂತ್ರಿಕ ಎಲೆಕ್ಟ್ರಾನಿಕ್ಸ್ ಮಾಹಿತಿ ತಂತ್ರಜ್ಞಾನ ಹಣಕಾಸು ಮುಂತಾದ ಇಲಾಖೆಯಲ್ಲಿ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಡಿಪ್ಲೋಮೋ ಶಿಕ್ಷಣ ಅಥವಾ ಸ್ನಾತಕೋತರ ಪದವಿಯನ್ನು ಪಡೆದಿರಬೇಕು. ಈ ಶಿಕ್ಷಣ ಹೊಂದಿರುವವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳಿಗೆ ಅನುಸಾರವಾಗಿ ಬೇಕಾಗಿರುವ ಶೈಕ್ಷಣಿಕ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೋಡಬಹುದು.
Grama panchayat recruitment – ಲೈಬ್ರರಿ ಮೇಲ್ವಿಚಾರಕರು ಹುದ್ದೆಗಳಿಗೆ ನೇಮಕಾತಿ
Cochin shipyard recruitment – ಕೊಚ್ಚಿನ್ ಶಿಪಿಯಾರ್ಡ್ ನೇಮಕಾತಿ ಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 30 ವರ್ಷ ಆಗಿರಬೇಕು. ಈ ವಯಸ್ಸಿನ ಒಳಗಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಇನ್ನು ಉಳಿದ ಅಭ್ಯರ್ಥಿಗಳಿಗೆ 600ಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಅಭ್ಯರ್ಥಿಗಳಿಗೆ ಮೊದಲಿಗೆ ಆನ್ಲೈನ್ ಮೂಲಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Cochin shipyard recruitment – ಕೊಚ್ಚಿನ್ ಶಿಪಿಯಾರ್ಡ್ ನೇಮಕಾತಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಸಂಸ್ಥೆಯ ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಕೆಳಗೆ ನೀಡಿದ್ದೇವೆ ನೋಡಿ. ಮೊದಲಿಗೆ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು. ನಂತರ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅರ್ಜಿ ನಮೂನೆ ಭರ್ತಿ ಮಾಡುವ ಮುನ್ನ ಕೊನೆಯ ದಿನಾಂಕವನ್ನು ನೋಡಿ ಸಲ್ಲಿಸುವುದು ಉತ್ತಮ. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 7 ಆಗಿದೆ. ಆಸಕ್ತರು ಈ ದಿನಾಂಕದ ಮುನ್ನ ಅರ್ಜಿಯನ್ನು ಸಲ್ಲಿಸಬಹುದು.
Notification PDF Download |
Download pdf |
Apply online link |
Click here |