Join Whatsapp Group

Join Telegram Group

ELIC recruitment – ELIC ನೇಮಕಾತಿ 2022

ELIC recruitment – ELIC ನೇಮಕಾತಿ 2022

ELIC recruitment – ELIC ನೇಮಕಾತಿ 2022 ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಧಿಕಾರಿಗಳು ಹೊಸ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಹೊಸ ಅಧಿಸೂಚನೆಯ ಪ್ರಕಾರ ಕರ್ನಾಟಕ ಸೇರಿದಂತೆ ಗುಜರಾತ್, ಮುಂಬೈ, ಮಹಾರಾಷ್ಟ್ರ ಲಕ್ನೋ, ಆಂಧ್ರ ಪ್ರದೇಶ, ಉತ್ತರ ಪ್ರದೇಶ ಮುಂತಾದ ಸ್ಥಳಗಳಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ನೇಮಕಾತಿಯನ್ನು ಆರಂಭ ಮಾಡಿದ್ದಾರೆ. ಒಟ್ಟು 190 ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ಆಸಕ್ತಿ ಇರುವವರು ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಿ ತಮ್ಮ ನೇಮಕಾತಿಯಲ್ಲಿ ಭಾಗವಹಿಸಬಹುದು. ನೇರ ಸಂದರ್ಶನ ನಡೆಯುವ ದಿನಾಂಕ ನವೆಂಬರ್ 29 ಆಗಿರುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಿ. ನೇರ ಸಂದರ್ಶನದಲ್ಲಿ ಭಾಗವಹಿಸಬಹುದು ಅದಕ್ಕೂ ಮೊದಲು ನೀವೇನಾದರೂ ನಮ್ಮ ವೆಬ್ಸೈಟ್ ಗೆ ಮೊದಲ ಬಾರಿ ಬರುತ್ತಿದ್ದರೆ ಸರ್ಕಾರಿ ಜಾಬ್‌ ಅಪ್‌ಡೇಟ್ ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪನ್ನು ಜಾಯಿನ್ ಆಗಿ.

ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಹುದ್ದೆಗಳ ವಿವರಗಳು

ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ ಹಲವು ಹುದ್ದೆಗಳಿಗೆ ನೇಮಕಾತಿಯನ್ನು ಆರಂಭ ಮಾಡಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಮುಂಬೈ ಸ್ಥಳದಲ್ಲಿ ಎಂಟು ಹುದ್ದೆಗಳಿಗೆ, ಬೆಂಗಳೂರು ಸ್ಥಳದಲ್ಲಿ ಒಂದು ಹುದ್ದೆಗಳಿಗೆ, ಅಂಡಮಾನ್ ಮತ್ತು ನಿಕೋಬಾರ್ ಸ್ಥಳದಲ್ಲಿ ಎರಡು ಹುದ್ದೆಗಳಿಗೆ, ಲಕ್ನೋದಲ್ಲಿ ಒಂದು ಹುದ್ದೆಗಳಿಗೆ, ಹೈದರಾಬಾದ್ ಸ್ಥಳದಲ್ಲಿ 166 ಹುದ್ದೆಗಳಿಗೆ ನೇಮಕಾತಿಯನ್ನು ಆರಂಭ ಮಾಡಿದ್ದಾರೆ. ಹುದ್ದೆಗಳ ಹೆಚ್ಚಿನ ಮಾಹಿತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಪ್ರಾರಂಭದಿಂದ ಕೊನೆಯವರೆಗೆ ಓದಬೇಕು. ಅಧಿಕೃತ ಅಧಿಸೂಚನೆಯನ್ನು ನಾವು ಲೇಖನದ ಕೊನೆಯಲ್ಲಿ ನೀಡಿದ್ದೇವೆ.

ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು

ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ ವಿವಿಧ ಹುದ್ದೆಗಳಿಗೆ ವಿವಿಧ ರೀತಿಯ ಶೈಕ್ಷಣಿಕ ಅರ್ಹತೆಗಳು ಬೇಕಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಸಿ ಎಸ್ ಇ ಅಥವಾ ಐಟಿ ಅಥವಾ ಇಸಿ ಇ ಎಲೆಕ್ಟ್ರಾನಿಕ್ಸ್ ಅಥವಾ ಮೆಕಾನಿಕಲ್ ಇಂಜಿನಿಯರಿಂಗ್ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು.

ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬಿ ಟೆಕ್ ಅಥವಾ ಬಿಇ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಬೇಕಾಗಿರುವ ಶಿಕ್ಷಣದ ಮಾಹಿತಿಯನ್ನು ವಿಸ್ತಾರವಾಗಿ ನೋಟಿಫಿಕೇಶನ್ ಅಲ್ಲಿ ನೀಡಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ನೋಟಿಫಿಕೇಶನ್ ಅನ್ನು ಸಂಪೂರ್ಣವಾಗಿ ಓದಿ.

ನೇಮಕಾತಿಗೆ ಬೇಕಾಗಿರುವ ವಯೋಮಿತಿ ಮಾಹಿತಿಗಳು : 

ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ಅಧಿಕೃತ ನೋಟಿಫಿಕೇಶನ್ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 25 ವರ್ಷದಿಂದ ಗರಿಷ್ಠ 45 ವರ್ಷದವರೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇರುತ್ತದೆ. 25 ವರ್ಷದಿಂದ 45 ವರ್ಷದ ಒಳಗೆ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು ಮತ್ತು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ವಯಸ್ಸಿನ ಮಿತಿಯ ಒಳಗೆ ಇರುವ ಅಭ್ಯರ್ಥಿಗಳಿಗೆ ಮಾತ್ರ ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇರುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವ ಮುನ್ನ ವಯೋಮಿತಿ ಮಾಹಿತಿಯನ್ನು ಸರಿಯಾಗಿ ಓದಿ ನಂತರ ತಮ್ಮರ್ಜಿಗಳನ್ನು ಸಲ್ಲಿಸಿ. ವಯೋಮಿತಿ ಸಡಿಲಿಕೆಯ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ.

ನೇಮಕಾತಿಯ ವಯೋಮಿತಿ ಸಡಿಲಿಕೆಯ ಮಾಹಿತಿಗಳು

ELIC recruitment – ELIC ನೇಮಕಾತಿ 2022 ವಿವಿಧ ಕೆಟಗರಿಯಲ್ಲಿರುವ ಅಭ್ಯರ್ಥಿಗಳಿಗೆ ವಿವಿಧ ರೀತಿಯ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಮೊದಲಿಗೆ obc ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ಕಾಲ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಇನ್ನು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಇನ್ನು ಉಳಿದ ಅಭ್ಯರ್ಥಿಗಳಿಗೆ ಅಂದರೆ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ವಯೋಮಿತಿ ಸಡಿಲಿಕೆ ಹೆಚ್ಚಿನ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ.

ನೇಮಕಾತಿಯ ಅರ್ಜಿ ಶುಲ್ಕದ ವಿವರಗಳು : ELIC recruitment – ELIC ನೇಮಕಾತಿ 2022

ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಬಿಡುಗಡೆ ಮಾಡಿದ ಹೊಸ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕವನ್ನು ವಿಧಿಸಲಾಗಿಲ್ಲ. ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಉಚಿತವಾಗಿ ಸಲ್ಲಿಸಬಹುದಾಗಿದೆ.

ನೇಮಕಾತಿಯ ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು

ಈ ಮೇಲೆ ನೀಡಲಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಮೊದಲಿಗೆ ತಮ್ಮ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಕಳಿಸಿಕೊಡಬೇಕು. ಅರ್ಜಿ ನಮೂನೆಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಿ ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಪ್ರಕ್ರಿಯೆ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಿರುವ ನೋಟಿಫಿಕೇಶನ್ ಮೂಲಕ ಸಂಪೂರ್ಣವಾಗಿ ಓದಬಹುದು.

ನೇಮಕಾತಿಯ ಅರ್ಜಿ ಸಲ್ಲಿಸುವ ಕ್ರಮಗಳು : ELIC recruitment – ELIC ನೇಮಕಾತಿ 2022

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಬಿಡುಗಡೆ ಮಾಡಿದ ಹೊಸ ಅಧಿಸಚನೆಯನ್ನು ಕಾಣಬಹುದು. ಹೊಸ ಅಧಿ ಸೂಚನೆಯನ್ನು ಸಂಪೂರ್ಣವಾಗಿ ಓದಿ. ನೀವು ಆ ಹುದ್ದೆಗಳಿಗೆ ಎಲ್ಲಾ ಮಾನದಂಡಗಳನ್ನು ಪೂರೈಸುತ್ತೀರಾ ಎಂದು ಖಚಿತ ಮಾಡಿಕೊಳ್ಳಿ. ನಂತರ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಪ್ರಾರಂಭದಿಂದ ಕೊನೆಯವರೆಗೆ ಓದಿ. ಮುಖ್ಯವಾಗಿ ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ಪರಿಶೀಲಿಸಿ ನಂತರವೇ ತಮ್ಮ ಅರ್ಜಿಗಳನ್ನು ಸಲ್ಲಿಸಿ. ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಅರ್ಜಿ ನಮೂನೆಯ ಜೊತೆ ನಿಮ್ಮ ಎಲ್ಲಾ ಅಧಿಕೃತ ದಾಖಲೆಗಳನ್ನು ಕೆಳಗೆ ನೀಡಿರುವ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಿ.

ನೇರ ಸಂದರ್ಶನ ನಡೆಯುವ ವಿಳಾಸ ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಹೈದರಾಬಾದ್ ಈ ವಿಳಾಸಕ್ಕೆ ಹಾಜರಾಗಿ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು

ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯುವ ದಿನಾಂಕ ನವೆಂಬರ್ 26, 28, 29 ಆಗಿರುತ್ತದೆ.

Conclusion: ELIC recruitment – ELIC ನೇಮಕಾತಿ 2022

ELIC recruitment – ELIC ನೇಮಕಾತಿ 2022 ಈ ಲೇಖನದಲ್ಲಿ ನಾವು ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.

 

 

 

 

Leave a Comment