Karnataka Bank recruitment – ಕರ್ನಾಟಕ ಬ್ಯಾಂಕ್ ನೇಮಕಾತಿ
Karnataka Bank recruitment – ಕರ್ನಾಟಕ ಬ್ಯಾಂಕ್ ನೇಮಕಾತಿ ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಕರ್ನಾಟಕ ಬ್ಯಾಂಕ್ ಬಿಡುಗಡೆ ಮಾಡಿದ ಹೊಸ ನೇಮಕಾತಿಯ ಬಗ್ಗೆ ಮಾಹಿತಿಯನ್ನು ತಿಳಿಸುತ್ತೇವೆ. ಕರ್ನಾಟಕ ಬ್ಯಾಂಕ್ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದಲ್ಲಿ ನೇಮಕಾತಿಯನ್ನು ಮಾಡಲು ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ. ಅಧಿಕೃತ ನೋಟಿಫಿಕೇಶನ್ ಪ್ರಕಾರ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಬ್ಯಾಂಕ್ ಕಾರ್ಯದರ್ಶಿ ಹುದ್ದೆಗಳಿಗೆ ನೇಮಕಾತಿಯನ್ನು ಕರೆಯಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಇ-ಮೇಲ್ ಮೂಲಕ ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 25 ಆಗಿರುತ್ತದೆ. ಈ ದಿನಾಂಕದ ಮುನ್ನ ತಮ್ಮ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಬ್ಯಾಂಕ್ ನೇಮಕಾತಿಯ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು
ಕರ್ನಾಟಕ ಬ್ಯಾಂಕ್ ಅಧಿಕಾರಿಗಳು ಬಿಡುಗಡೆ ಮಾಡಿದ ಅಧಿಕೃತ ನೋಟಿಫಿಕೇಶನ್ ಪ್ರಕಾರ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಯಾವುದೇ ವಿಷಯದಲ್ಲಿ ಪದವಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಪದವಿ ಶಿಕ್ಷಣವನ್ನು ಪೂರ್ಣಮಾಡಿದ ಅಭ್ಯರ್ಥಿಗಳು ಕರ್ನಾಟಕ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆಯ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ನೋಟಿಫಿಕೇಶನ್ ಅನ್ನು ಪರಿಶೀಲಿಸಿ.
KEA recruitment – KEA ನೇಮಕಾತಿ 2022-23
ಬೇಕಾಗಿರುವ ವಯೋ ಮಿತಿ ಮಾಹಿತಿಗಳು
ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯನ್ನು ವಿಧಿಸಲಾಗಿದೆ. ಸಂಸ್ಥೆಯು ಬಿಡುಗಡೆ ಮಾಡಿದ ಅಧಿಕೃತ ನೋಟಿಫಿಕೇಶನ್ ಪ್ರಕಾರ ಕರ್ನಾಟಕ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 50 ವರ್ಷ ಆಗಿರುತ್ತದೆ. ಈ ವಯಸ್ಸಿನ ಒಳಗಿರುವ ಅಭ್ಯರ್ಥಿಗಳು ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
ನೇಮಕಾತಿಯ ಅರ್ಜಿ ಶುಲ್ಕದ ವಿವರಗಳು : Karnataka Bank recruitment – ಕರ್ನಾಟಕ ಬ್ಯಾಂಕ್ ನೇಮಕಾತಿ
ಅಧಿಕೃತ ನೋಟಿಫಿಕೇಶನ್ ಪ್ರಕಾರ ಕರ್ನಾಟಕ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ವಿಧಿಸಿಲ್ಲ. ಎಲ್ಲಾ ಕೆಟಗರಿಯಲ್ಲಿ ಬರುವ ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಶುಲ್ಕದ ಸಂಪೂರ್ಣ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಒಮ್ಮೆ ಪರಿಶೀಲಿಸುವುದು ಉತ್ತಮ. ಅಧಿಕೃತ ನೋಟಿಫಿಕೇಶನ್ ಅಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ನೋಟಿಫಿಕೇಶನ್ ಅನ್ನು ಪ್ರಾರಂಭದಿಂದ ಕೊನೆಯವರೆಗೆ ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸುವುದು ಉತ್ತಮ. ಕರ್ನಾಟಕ ಬ್ಯಾಂಕ್ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಲಿಂಕನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ. ಅಲ್ಲಿ ಕ್ಲಿಕ್ ಮಾಡಿ ಪಿಡಿಎಫ್ ಫೈಲ್ ಅನ್ನು ಡೌನ್ಲೋಡ್ ಮಾಡಿ ಅಧಿಕೃತ ನೋಟಿಫಿಕೇಶನ್ ಅನ್ನು ಸಂಪೂರ್ಣವಾಗಿ ಓದಬಹುದಾಗಿದೆ.
ನೇಮಕಾತಿಯ ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು
ಕರ್ನಾಟಕ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮಾಹಿತಿಗಳು ಈ ಕೆಳಗೆ ನೀಡಿದ್ದೇವೆ ನೋಡಿ. ಈ ಮೇಲೆ ನೀಡಿರುವ ಹುದ್ದೆಗಳಿಗೆ ಬಯಸುವ ಅಭ್ಯರ್ಥಿಗಳು ಮೊದಲಿಗೆ ತಮ್ಮ ಅರ್ಜಿಗಳನ್ನು ಇ-ಮೇಲ್ ಮೂಲಕ ಕಳುಹಿಸಬೇಕು. ಪರಿಶೀಲಿಸಿದ ನಂತರ ಆಯ್ಕೆಯಾದ ಅಭ್ಯರ್ಥಿಗಳನ್ನು ಇ-ಮೇಲ್ ಮೂಲಕ ತಿಳಿಸಲಾಗುತ್ತದೆ. ಇ-ಮೇಲ್ ಮೂಲಕ ತಿಳಿಸಿದ ಅಭ್ಯರ್ಥಿಗಳನ್ನು ಮುಂದಿನ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಬ್ಯಾಂಕ್ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಈ ಲಿಖಿತ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಅಭ್ಯರ್ಥಿಗಳನ್ನು ಕೊನೆಯ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕೊನೆಯ ಹಂತವು ನೇರ ಸಂದರ್ಶನ ಆಗಿರುತ್ತದೆ. ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಸಂಸ್ಥೆಯ ಅಧಿಕೃತ ನೋಟಿಫಿಕೇಶನ್ ಪ್ರಕಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು :
- ಮೇಲೆ ತಿಳಿಸಿದಂತೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಕರ್ನಾಟಕ ಬ್ಯಾಂಕಿನ ಅಧಿಕೃತ ವೆಬ್ಸೈಟ್ ಗೆ ಮೊದಲು ಬೇಟಿಯನ್ನು ನೀಡಬೇಕು. ಕರ್ನಾಟಕ ಬ್ಯಾಂಕ್ ಅಧಿಕೃತ ವೆಬ್ಸೈಟ್ ಅನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.
- ನಂತರ ಕರ್ನಾಟಕ ಬ್ಯಾಂಕ್ ವೆಬ್ಸೈಟ್ನ ಹೋಂ ಪೇಜ್ ನಲ್ಲಿ ಸಂಸ್ಥೆಯು ಪ್ರಕಟ ಮಾಡಿದ ಹೊಸ ಅಧಿ ಸೂಚನೆಯನ್ನು ಕಾಣಬಹುದು. ನೋಟಿಫಿಕೇಶನ್ ಅನ್ನು ಮೊದಲು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಪ್ರಾರಂಭದಿಂದ ಕೊನೆಯವರೆಗೆ ಓದಬೇಕು.
- ಸಂಪೂರ್ಣವಾಗಿ ಓದಿದ ನಂತರ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮುನ್ನ ಅರ್ಜಿ ಸಲ್ಲಿಕೆಯ ಪ್ರಾರಂಭ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ಪರಿಶೀಲಿಸಿ ನಂತರವೇ ಅರ್ಜಿಯನ್ನು ಭರ್ತಿ ಮಾಡಬೇಕು.
- ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಸಂಸ್ಥೆಯು ತಿಳಿಸಿರುವಂತೆ ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
- ಮುಂದಿನ ಹಂತದಲ್ಲಿ ಸಂಸ್ಥೆಯ ಅಧಿಕೃತ ಇ-ಮೇಲ್ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಮತ್ತು ಬೇಕಾಗಿರುವ ಎಲ್ಲಾ ಅಗತ್ಯ ದಾಖಲೆಗಳನ್ನು ಕಳುಹಿಸಬೇಕು.
- ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಜಿ ಸಲ್ಲಿಸುವ ಮುನ್ನ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಪ್ರಾರಂಭ ದಿನಾಂಕ ಅನ್ನು ಅಧಿಕೃತ ನೋಟಿಫಿಕೇಶನ್ ಅಲ್ಲಿ ಸರಿಯಾಗಿ ಓದಿ ನಂತರವೇ ಅರ್ಜಿ ನಮೂನೆಯನ್ನು ಸಲ್ಲಿಸಬೇಕು.
- ಕಳುಹಿಸಿಕೊಡಬೇಕಾದ ಅಧಿಕೃತ ಇ-ಮೇಲ್ ವಿಳಾಸವನ್ನು ಕೊನೆಯಲಿ ನೀಡಿದ್ದೇವೆ ಪರಿಶೀಲಿಸಿ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿ :
ಕರ್ನಾಟಕ ಬ್ಯಾಂಕ್ ಬಿಡುಗಡೆ ಮಾಡಿದ ಹೊಸ ನೋಟಿಫಿಕೇಶನ್ ಪ್ರಕಾರ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಡಿಸೆಂಬರ್ 16 ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಡಿಸೆಂಬರ್ 25 ಆಗಿರುತ್ತದೆ. ಈ ದಿನಾಂಕದ ಒಳಗೆ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗುತ್ತದೆ ಗಮನಿಸಿ.
Conclusion :
ಈ ಲೇಖನದಲ್ಲಿ ನಾವು ಕರ್ನಾಟಕ ಬ್ಯಾಂಕ್ ಬಿಡುಗಡೆ ಮಾಡಿದ ಹೊಸ ನೋಟಿಫಿಕೇಶನ್ ನ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.