KSFSLR recruitment – KSFSLR ನೇಮಕಾತಿ 2022
KSFSLR recruitment – KSFSLR ನೇಮಕಾತಿ 2022 ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯ ನೇಮಕಾತಿಯನ್ನು ಆರಂಭ ಮಾಡಿದ್ದಾರೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಈ ಲೇಖನದಲ್ಲಿ ನಾವು ಈ ನೇಮಕಾತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಅದಕ್ಕೂ ಮುನ್ನ ನೀವೇನಾದರೂ ನಮ್ಮ ವೆಬ್ಸೈಟ್ ಗೆ ಮೊದಲ ಬಾರಿ ಬರುತ್ತಿದ್ದರೆ ನಮ್ಮ ಟೆಲಿಗ್ರಾಂ ಗ್ರೂಪನ್ನು ಜಾಯಿನ್ ಆಗಿರಿ.
ಈ ಲೇಖನದಲ್ಲಿ ನಾವು ಸರ್ಕಾರ ಬಿಡುಗಡೆ ಮಾಡಿದ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಿರಿಯ ವೈಜ್ಞಾನಿಕ ಅಧಿಕಾರಿ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ನೇಮಕಾತಿಯನ್ನು ಆರಂಭ ಮಾಡಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 7 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದು. ಈ ಕೆಳಗೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ.
ಕರ್ನಾಟಕ ರಾಜ್ಯ ವಿಧಿ ವಿಜ್ಞಾನ ಪ್ರಯೋಗಲಯ ನೇಮಕಾತಿಯ ಹುದ್ದೆಗಳ ವಿವರಗಳು
ಸರ್ಕಾರ ಬಿಡುಗಡೆ ಮಾಡಿದ ಹೊಸ ಅಧಿಸೂಚನೆಯ ಪ್ರಕಾರ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಹಿರಿಯ ವೈಜ್ಞಾನಿಕ ಅಧಿಕಾರಿ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಹುದ್ದೆಗಳ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬಹುದು.
Co operative Bank recruitment – ಸಹಕಾರಿ ಬ್ಯಾಂಕ್ ನೇಮಕಾತಿ
ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ ಮಾಹಿತಿಗಳು
ಅಧಿಕೃತ ಅಧಿಸೂಚನೆಯ ಪ್ರಕಾರ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಸ್ನಾತಕೋತ್ತರ ಪದವಿ ಅಥವಾ ಡಾಕ್ಟರೇಟ್ ಪದವಿಯನ್ನು ಪೂರ್ಣಗೊಳಿಸಿರಬೇಕು. ಈ ಶಿಕ್ಷಣಗಳನ್ನು ಪೂರ್ಣ ಮಾಡಿದ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಹಿರಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಸ್ನಾತಕೋತರ ಪದವಿಯನ್ನು ಪೂರ್ಣ ಮಾಡಿರಬೇಕು.
ಬೇಕಾಗಿರುವ ಅನುಭವದ ವಿವರಗಳು :
ಉಪನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಕನಿಷ್ಠ ಎರಡು ವರ್ಷಗಳ ಕಾಲ ಅನುಭವವನ್ನು ಹೊಂದಿರಬೇಕು. ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ನಿರ್ದೇಶಕರಾಗಿ ಎರಡು ವರ್ಷಗಳ ಅನುಭವವನ್ನು ಹೊಂದಿರಬೇಕು.
ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು : KSFSLR recruitment – KSFSLR ನೇಮಕಾತಿ 2022
ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಗರಿಷ್ಠ ವಯಸ್ಸು 65 ಆಗಿರಬೇಕು. ಈ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆ ಮಾಹಿತಿ
ವಯೋಮಿತಿ ಸಡಿಲಿಕ್ಕೆ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ನೋಡಬಹುದು.
ಬೇಕಾಗಿರುವ ಅರ್ಜಿ ಶುಲ್ಕದ ಮಾಹಿತಿಗಳು : KSFSLR recruitment – KSFSLR ನೇಮಕಾತಿ 2022
ಕರ್ನಾಟಕ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿ ಮಾಡುವ ಅಗತ್ಯ ಇರುವುದಿಲ್ಲ. ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು
ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದ ಅಧಿಕೃತ ನೋಟಿಫಿಕೇಷನ್ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅರ್ಜಿ ನಮೂನೆ ಭರ್ತಿ ಮಾಡಿದ ನಂತರ ಆಯ್ಕೆಯಾದ ಅಭ್ಯರ್ಥಿಗಳನ್ನು ತಿಳಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ಲಿಖಿತ ಪರೀಕ್ಷೆಗಳಲ್ಲಿ ಕೆಲವು ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಮೊದಲು ನಡೆಸುವ ಲಿಖಿತ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಮುಂದಿನ ಹಂತಕ್ಕೆ ಅಂದರೆ ಎರಡನೆಯ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ. ಗಮನಿಸಿ ಲಿಖಿತ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ಪಡೆದ ಅಭ್ಯರ್ಥಿಗಳನ್ನು ಮಾತ್ರ ಎರಡನೆಯ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ.
KSFSLR recruitment – KSFSLR ನೇಮಕಾತಿ 2022 : ಎರಡನೇ ಮತ್ತು ಕೊನೆಯ ಹಂತದಲ್ಲಿ ಅಭ್ಯರ್ಥಿಗೆ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂದರ್ಶನದಲ್ಲಿ ನೇಮಕಾತಿ ಮತ್ತು ಉಳಿದ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಲಾಗುತ್ತದೆ. ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಸಂಸ್ಥೆ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು
- ಕರ್ನಾಟಕ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಕೆಳಗೆ ನೀಡಿರುವ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ಅಧಿಕೃತ ವೆಬ್ಸೈಟ್ ಅನ್ನು ಭೇಟಿ ನೀಡಿದ ನಂತರ ಸಂಸ್ಥೆ ಬಿಡುಗಡೆ ಮಾಡಿದ ಹೊಸ ಅಧಿಸೂಚನೆಯನ್ನು ಕಾಣಬಹುದು.
- ಅಧಿಸೂಚನೆಯ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಸಬೇಕಾಗಿರುವ ಅರ್ಜಿ ನಮೂನೆಯನ್ನು ಕಾಣಬಹುದು. ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮುನ್ನ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ಪರಿಶೀಲಿಸಿ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.
- ಅರ್ಜಿ ಸಲ್ಲಿಸುವಾಗ ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿಯನ್ನು ಸಲ್ಲಿಸಬೇಕು.
- ನಂತರ ಶುಲ್ಕವನ್ನು ಪಾವತಿ ಮಾಡಿ ಬೇಕಾಗಿರುವ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಈ ಕೆಳಗೆ ನೀಡಿರುವ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಕಳುಹಿಸಬೇಕಾದ ವಿಳಾಸ : ಸದಸ್ಯ ಕಾರ್ಯದರ್ಶಿ ಮತ್ತು ನಿರ್ದೇಶಕರು ವಿಧಿ ವಿಜ್ಞಾನ ಪ್ರಯೋಗಾಲಯ ಬೆಂಗಳೂರು ಸಹಾಯಕ ನಿರ್ದೇಶಕರು ಮತ್ತು ಹಿರಿಯ ವೈಜ್ಞಾನಿಕ ಅಧಿಕಾರಿಗಳ ನೇಮಕಾತಿ ಸಮಿತಿ ಗುತ್ತಿಗೆ ಮಡಿವಾಳ ಬೆಂಗಳೂರು ಈ ವಿಳಾಸಕ್ಕೆ ತಮ್ಮ ಅರ್ಜಿ ನಮೂನೆಯನ್ನು ಕಳುಹಿಸಬೇಕು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
KSFSLR recruitment – ಕರ್ನಾಟಕ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯ ನೇಮಕಾತಿಗೆ ಅರ್ಜಿ ಸಲ್ಲಿಸುವ ಇರುವ ಪ್ರಾರಂಭ ದಿನಾಂಕ ನವೆಂಬರ್ 22 ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 7 ಆಗಿರುತ್ತದೆ ಈ ದಿನಾಂಕದ ಮುನ್ನ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
Conclusion :
ಈ ಲೇಖನದಲ್ಲಿ ನಾವು ಕರ್ನಾಟಕ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದ ಹೊಸ ನೇಮಕಾತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.