KSRTC recruitment Karnataka – KSRTC ನೇಮಕಾತಿ
KSRTC recruitment Karnataka – KSRTC ನೇಮಕಾತಿ : ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧಿಕಾರಿಗಳು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಿರುವ ಹೊಸ ಅಧಿಕೃತ ನೋಟಿಫಿಕೇಶನ್ ಮಾಹಿತಿಯನ್ನು ನೀಡುತ್ತೇವೆ. ಹೆಚ್ಚಿನ ಅಭ್ಯರ್ಥಿಗಳು ಈಗ ಕೆಎಸ್ಆರ್ಟಿಸಿ ಹೊಸ ನೇಮಕಾತಿಯ ಬಗ್ಗೆ ಹುಡುಕುತ್ತಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಚಿವರಾದ ಶ್ರೀರಾಮುಲು ಅವರು ವಿಧಾನಸಭೆಯಲ್ಲಿ ಅಧಿಕೃತವಾಗಿ ನೇಮಕಾತಿಯನ್ನು ಮಾಡುವ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಸಚಿವರು ತಿಳಿಸಿದ ಮಾಹಿತಿಯಂತೆ ಕರ್ನಾಟಕ ರಾಜ್ಯದಲ್ಲಿ ಒಟ್ಟು 2,000 ಚಾಲಕರ ಹುದ್ದೆಗೆ ನೇಮಕಾತಿಯನ್ನು ಶೀಘ್ರದಲ್ಲಿಯೇ ಪ್ರಾರಂಭ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಸದ್ಯ ಚಾಲಕರ ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ರೂ.10,000 ನೀಡಲಾಗುತ್ತಿದೆ. ಇನ್ನು ಮುಂದೆ ನೇಮಕ ಮಾಡುವ ತರಬೇತಿ ಚಾಲಕರಿಗೆ 20000 ನೀಡುವುದಾಗಿ ಭರವಸೆ ನೀಡಿದ್ದಾರೆ. ಇದೇ ರೀತಿ ಅಧಿಕೃತ ಸೂಚನೆಯನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಿದ್ದಾರೆ ಎಂಬುದನ್ನು ತಿಳಿಸಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ ಆದ್ದರಿಂದ ಲೇಖನವನ್ನು ಕೊನೆಯವರೆಗೆ ಓದಿ.
ಸಂಸ್ಥೆ | ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ – KSRTC recruitment Karnataka |
ಒಟ್ಟು ಹುದ್ದೆಗಳು | 2000 |
ಉದ್ಯೋಗ ಸ್ಥಳಗಳು | ಕರ್ನಾಟಕ |
ವಿದ್ಯಾಭ್ಯಾಸ | ಎಸ್ ಎಸ್ ಎಲ್ ಸಿ ಪಾಸ್ |
ಅರ್ಜಿ ಸಲ್ಲಿಸುವ ಕ್ರಮ | ಆನ್ಲೈನ್ ಮೂಲಕ |
ಹುದ್ದೆಗಳಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು – Education qualification:
ಸಂಸ್ಥೆ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ ಕೆ ಎಸ್ ಆರ್ ಟಿ ಸಿ ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಅಧಿಕೃತವಾಗಿ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಅಥವಾ ಪಿಯುಸಿ ಶಿಕ್ಷಣವನ್ನು ಒಳ್ಳೆಯ ಅಂಕಗಳೊಂದಿಗೆ ಪಾಸಾಗಿರಬೇಕು.
ಹತ್ತನೇ ತರಗತಿಯಲ್ಲಿ ನಿರ್ದಿಷ್ಟ ಅಂಕದೊಂದಿಗೆ ಪಾಸ್ ಆಗಿರಬೇಕು ಬೇಕಾಗಿರುವ ನಿರ್ದಿಷ್ಟ ಅಂಕದ ಮಾಹಿತಿಯನ್ನು ನೋಟಿಫಿಕೇಶನ್ ಅಲ್ಲಿ ನೀಡಲಾಗಿದೆ ಆದ್ದರಿಂದ ಎಚ್ಚರಿಕೆಯಿಂದ ಸರಿಯಾಗಿ ಓದಿ. ಶಿಕ್ಷಣವನ್ನು ಪೂರ್ಣ ಮಾಡಿದ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು. ಶೈಕ್ಷಣಿಕ ಹೆಚ್ಚಿನ ಮಾಹಿತಿಯನ್ನು ಅಧಿಕೃತ ವೆಬ್ಸೈಟ್ನಲ್ಲಿ ಪಡೆಯಬಹುದು.
ಕೆಎಸ್ಆರ್ಟಿಸಿ ನೇಮಕಾತಿ ಅರ್ಜಿ ಶುಲ್ಕದ ಮಾಹಿತಿಗಳು :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧಿಕಾರಿಗಳು ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ವಿಧಿಸಿಲ್ಲ. ಈ ಮೇಲೆ ನೀಡಿರುವ 2000 ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಉಚಿತವಾಗಿ ತಮ್ಮರ್ಜಿಗಳನ್ನು ಸಲ್ಲಿಸಬಹುದು. KSRTC recruitment Karnataka ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಎಲ್ಲಾ ಕೆಟಗರಿಯಲ್ಲಿ ಬರುವ ಅಭ್ಯರ್ಥಿಗಳಿಗೂ ಯಾವುದೇ ರೀತಿಯ ಅಗತ್ಯ ಇರುವುದಿಲ್ಲ.
KEA recruitment – KEA ನೇಮಕಾತಿ 2022-23
ನೇಮಕಾತಿಯ ಆಯ್ಕೆ ಪ್ರಕ್ರಿಯೆ ಮಾಹಿತಿಗಳು : KSRTC recruitment Karnataka – KSRTC ನೇಮಕಾತಿ
- ಎಸ್ ಆರ್ ಟಿ ಸಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮಾಹಿತಿಗಳು ಈ ಕೆಳಗಿನಂತಿವೆ. ಈ ಮೇಲೆ ನೀಡಿರುವ 2000 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಆನ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನಿಗದಿತ ದಿನಾಂಕದಂದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಡ್ರೈವಿಂಗ್ ಟೆಸ್ಟ ನಡೆಸಲಾಗುತ್ತದೆ.
- ಡ್ರೈವಿಂಗ್ ಟೆಸ್ಟ್ ನಲ್ಲಿ ಪಾಸಾದ ಅಭ್ಯರ್ಥಿಗಳನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ. ಎರಡನೆಯ ಹಂತದಲ್ಲಿ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನೀಡಲಾಗುತ್ತದೆ.
- ಕರ್ನಾಟಕ ರಾಜ ರಸ್ತೆ ಸಾರಿಗೆ ನಿಗಮ ಸಂಬಂಧಿಸಿದ ಕೆಲವು ಪ್ರಶ್ನೆಗಳನ್ನು ಲಿಖಿತ ಪರೀಕ್ಷೆಯಲ್ಲಿ ಕೇಳಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ಪಾಸಾದ ಅಭ್ಯರ್ಥಿಗಳನ್ನು ಕೊನೆಯ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ.
- ಕೊನೆಯ ಹಂತದಲ್ಲಿ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂದರ್ಶನದಲ್ಲಿ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳುತ್ತಾರೆ ಮತ್ತು ವೈಯಕ್ತಿಕ ಪ್ರಶ್ನೆಗಳನ್ನು ಕೂಡ ಕೇಳುತ್ತಾರೆ.
- ನೇರ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಮಾತ್ರ ಸಂಸ್ಥೆಯ ಅಧಿಕೃತ ಅಧಿಸೂಚನೆಯ ಪ್ರಕಾರ ನೇಮಕಾತಿ ಮಾಡಲಾಗುತ್ತದೆ. ಆದ್ದರಿಂದ ಅಭ್ಯರ್ಥಿಗಳು ಗಮನಿಸಬೇಕಾದ ಮಾಹಿತಿ ಏನೆಂದರೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಡ್ರೈವಿಂಗ್ ಟೆಸ್ಟ್ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನವನ್ನು ನಡೆಸಲಾಗುತ್ತದೆ.
- ಈ ಮೂರು ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಮಾತ್ರ ನೇಮಕಾತಿ ಮಾಡಲಾಗುತ್ತದೆ ಆದ್ದರಿಂದ ಈ ಮೂರು ಪರೀಕ್ಷೆಯಲ್ಲಿಯೂ ಉತ್ತಮ ಪ್ರದರ್ಶನವನ್ನು ನೀಡಲು ಪ್ರಯತ್ನ ಮಾಡಿ. ಆಯ್ಕೆ ಪ್ರಕ್ರಿಯೆ ಬಗ್ಗೆ ನಿಮಗೆ ಯಾವುದೇ ಪ್ರಶ್ನೆಗಳಿದ್ದರೆ ಕಮೆಂಟ್ ಮೂಲಕ ನಮಗೆ ತಿಳಿಸಬಹುದು.
- ಇಲ್ಲವಾದರೆ ಸಂಸ್ಥೆಯ ಅಧಿಕೃತ ಹೆಲ್ಪ್ಲೈನ್ ಸಂಖ್ಯೆಗೆ ಫೋನ್ ಮಾಡಿ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ನೇರವಾಗಿ ನಮಗೂ ಕಾಂಟಾಕ್ಟ್ ಮಾಡಬಹುದು ನಮ್ಮ ಟೆಲಿಗ್ರಾಂ ಗ್ರೂಪ್ ಲಿಂಕ್ ಅನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ಗಮನಿಸಿ.
ಕೆಎಸ್ಆರ್ಟಿಸಿ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕ್ರಮಗಳು :
- ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅರ್ಜಿ ಸಲ್ಲಿಸುವ ಕ್ರಮಗಳ ಬಗ್ಗೆ ಸಂಕ್ಷಿಪ್ತವಾಗಿ ಕೆಳಗೆ ನೀಡಿದ್ದೇವೆ ಪ್ರತಿಯೊಂದು ಅಂತವನ್ನು ಸರಿಯಾಗಿ ಓದಿ ನಂತರವೇ ತಮ್ಮ ಅರ್ಜಿಗಳನ್ನು ಸಲ್ಲಿಸುವುದು ಉತ್ತಮ. KSRTC ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕ್ರಮಗಳು ಈ ಕೆಳಗಿನಂತಿವೆ :
- ಮೊದಲಿಗೆ ಅಭ್ಯರ್ಥಿಗಳು ಈ ಮೇಲೆ ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಬೇಕು. ಈ ಮೇಲೆ ನೀಡಿರುವಂತೆ ಒಟ್ಟು ಸಾವಿರ ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಎಸ್ಆರ್ಟಿಸಿ ಅಧಿಕೃತ ವೆಬ್ಸೈಟ್ ಗೆ ಮೊದಲು ಬೇಟಿಯನ್ನು ನೀಡಬೇಕು.
- ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಸಂಸ್ಥೆಯು ಇತ್ತೀಚೆಗೆ ಬಿಡುಗಡೆ ಮಾಡಿದ ಹೊಸ ಚಾಲಕ ಹುದ್ದೆಗಳ ನೋಟಿಫಿಕೇಶನ್ ಅನ್ನು ಪರಿಶೀಲಿಸಬೇಕು.
- ನಂತರ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಪ್ರಾರಂಭದಿಂದ ಕೊನೆಯವರೆಗೆ ಸಂಪೂರ್ಣವಾಗಿ ಓದಬೇಕು. ಅಧಿಕೃತ ಅಧಿಸೂಚನೆಯನ್ನು ಸಂಸ್ಥೆಯು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಿದೆ, ಸಂಸ್ಥೆಯು ಬಿಡುಗಡೆ ಮಾಡಿದ ನಂತರ ನಮ್ಮ ವೆಬ್ಸೈಟ್ನಲ್ಲಿ ಶೀಘ್ರದಲ್ಲಿ ಅಪ್ಡೇಟ್ ಮಾಡಲಾಗುವುದು.
- ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿದ ನಂತರ ನೀವು ಆ ಹುದ್ದೆಗಳಿಗೆ ಅರ್ಹ ಇದ್ದೀರಾ ಎಂಬುದನ್ನು ಪರಿಶೀಲಿಸಬೇಕು.
- ಅರ್ಹ ಇದ್ದರೆ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಬೇಕು.
- ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿದ ನಂತರ ಯಾವುದೇ ತಪ್ಪುಗಳನ್ನು ಮಾಡದೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಪ್ರಾರಂಭದಿಂದ ಕೊನೆಯವರೆಗೆ ಭರ್ತಿ ಮಾಡಬೇಕು.
- ಭರ್ತಿ ಮಾಡಿದ ನಂತರ ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಅರ್ಜಿ ಶುಲ್ಕದ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ನೋಟಿಫಿಕೇಶನ್ ಅನ್ನು ಓದಬಹುದು.
- ಅರ್ಜಿ ಶುಲ್ಕವನ್ನು ಪಾವತಿ ಮಾಡಿದ ನಂತರ ಕೊನೆಯ ಹಂತದಲ್ಲಿ ನಿಮ್ಮ ಭವಿಷ್ಯತ್ತಿನ ಉಪಯೋಗಕ್ಕಾಗಿ ಅರ್ಜಿ ನಮೂನೆಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು.
- ಕೆ ಎಸ್ ಆರ್ ಟಿ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಮೇಲೆ ನೀಡಿರುವ ಪ್ರಕಾರ ತಮ್ಮ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕ್ರಮಗಳ ಬಗ್ಗೆ ಯಾವುದೇ ಗೊಂದಲ ಅಥವಾ ಮಾಹಿತಿ ಬೇಕಾದಲ್ಲಿ ಅಧಿಕೃತ ಹೆಲ್ಪ್ ಲೈನ್ ನಂಬರ್ಗೆ ಫೋನ್ ಮಾಡಿ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಸಂಸ್ಥೆಯು ಈಗ ಕೇವಲ ಘೋಷಣೆಯನ್ನು ಮಾತ್ರ ಮಾಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ರಾಜ್ಯ ಸಚಿವರಾದ ಶ್ರೀರಾಮುಲು ಅವರು ಅಧಿಕೃತವಾಗಿ ವಿಧಾನಸಭೆಯಲ್ಲಿದರ ಬಗ್ಗೆ ಮಾಹಿತಿ ನೀಡಿದ್ದು ಕರ್ನಾಟಕ ರಾಜದಾದ್ಯಂತ ಖಾಲಿ ಇರುವ ಒಟ್ಟು 2000 ಚಾಲಕ ಹುದ್ದೆಗಳಿಗೆ ನೇಮಕಾತಿಯನ್ನು ಇನ್ನು ಕೆಲವೇ ದಿನಗಳಲ್ಲಿ ಮಾಡಲಾಗುವುದೆಂದು ಅಧಿಕೃತವಾಗಿ ತಿಳಿಸಿದ್ದಾರೆ. ರಾಜ್ಯ ಸಾರಿಗೆ ನಿಗಮ ಅಧಿಕಾರಿಗಳು ಅಧಿಕೃತವಾಗಿ ಬಿಡುಗಡೆ ಮಾಡಿದ ನಂತರ ಅಧಿಕೃತ ನೋಟಿಫಿಕೇಶನ್ ಅನ್ನು ನಮ್ಮ ವೆಬ್ಸೈಟ್ನಲ್ಲಿ ಅಪ್ಡೇಟ್ ಮಾಡುತ್ತೇವೆ.
KSRTC recruitment Karnataka ಹೆಚ್ಚಿನ ಅಭ್ಯರ್ಥಿಗಳು ಈ ಅಧಿಸೂಚನೆಯ ಬಿಡುಗಡೆಗೆ ಕಾಯುತ್ತಿದ್ದಾರೆ. ಅಧಿಕೃತವಾಗಿ ಸಚಿವರು ಹೇಳಿದಂತೆ ಈ ತಿಂಗಳ ಕೊನೆಯೆಲ್ಲಿ ಅಥವಾ ಮುಂದಿನ ತಿಂಗಳ ಮೊದಲ ವಾರದಲ್ಲಿ ಕೆಎಸ್ಆರ್ಟಿಸಿ ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಲಿದೆ. ಸಂಸ್ಥೆ ಬಿಡುಗಡೆ ಮಾಡಿದ ಕೂಡಲೇ ನಮ್ಮ ವೆಬ್ಸೈಟ್ನಲ್ಲಿ ನಾವು ಅಪ್ಡೇಟ್ ಮಾಡುತ್ತೇವೆ.
ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಗಮನಿಸಬೇಕಾದ ಮಾಹಿತಿ
- KSRTC recruitment Karnataka – ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಗಮನಿಸಬೇಕಾದ ವಿಷಯ ಅಭ್ಯರ್ಥಿಗಳು ಮೊದಲಿಗೆ ಅಧಿಕೃತ ನೋಟಿಫಿಕೇಶನ್ ಅನ್ನು ಸಂಪೂರ್ಣವಾಗಿ ಪ್ರಾರಂಭದಿಂದ ಕೊನೆಯವರೆಗೆ ಓದಬೇಕು.
- ಮುಖ್ಯವಾಗಿ ಅಭ್ಯರ್ಥಿಗಳು ಬೇಕಾಗಿರುವ ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆ ಮಾಹಿತಿಗಳನ್ನು ಸರಿಯಾಗಿ ಓದಬೇಕು.
- ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ಪರಿಶೀಲಿಸಿ ಮಂತ್ರವೇ ಅರ್ಜಿಗಳನ್ನು ಸಲ್ಲಿಸಬೇಕು ಏಕೆಂದರೆ ಕೊನೆಯ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಅಪೂರ್ಣ ಅರ್ಜಿಗಳೆಂದು ಪರಿಗಣಿಸಲಾಗುವುದರಿಂದ ನೀಡಿರುವ ದಿನಾಂಕದ ಮುನ್ನ ಪ್ರತಿಯೊಬ್ಬರು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
- ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಯಾವುದೇ ತಪ್ಪುಗಳನ್ನು ಮಾಡಬಾರದು ಕೇಳಲಾಗುವ ಎಲ್ಲಾ ಮಾಹಿತಿಗಳನ್ನು ಅಧಿಕೃತ ದಾಖಲೆಯಗಳೊಂದಿಗೆ ಸಲ್ಲಿಸಬೇಕು.
- ಸಂಸ್ಥೆಯು ಬಿಡುಗಡೆ ಮಾಡಿರುವ ನೋಟಿಫಿಕೇಶನ್ ಪ್ರಕಾರ ಅರ್ಜಿ ನಮೂನೆಯ ಜೊತೆ ಬೇಕಾಗಿರುವ ಅಗತ್ಯ ದಾಖಲೆಗಳ ಮಾಹಿತಿಯನ್ನು ನೀಡಿದ್ದಾರೆ. ಅರ್ಜಿ ನಮೂನೆಯ ಜೊತೆ ನೀಡಿರುವ ಎಲ್ಲಾ ಅಗತ್ಯ ದಾಖಲೆಗಳನ್ನು ನೀಡಬೇಕು.
- ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಅರ್ಜಿ ಶುಲ್ಕದ ಮಾಹಿತಿಯನ್ನು ಸರಿಯಾಗಿ ಓದಿ ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ತಮ್ಮ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೂರು ಹಂತದಲ್ಲಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಮೊದಲನೆಯದು ಡ್ರೈವಿಂಗ್ ಟೆಸ್ಟ್ ಎರಡನೆಯದು ಲಿಖಿತ ಪರೀಕ್ಷೆ ಕೊನೆಯ ಹಂತ ನೇರ ಸಂದರ್ಶನ
- ನೀಡಲಾಗುವ ಮೂರು ಹಂತದಲ್ಲಿಯೂ ಆಯ್ಕೆಯಾದ ಅಭ್ಯರ್ಥಿಗಳನ್ನು ಮಾತ್ರ ನೇಮಕಾತಿ ಮಾಡಲಾಗುತ್ತದೆ. ಈ ಮೂರು ಹಂತದಲ್ಲಿಯೂ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಂಬಂಧಿಸಿದ್ದ ಪ್ರಶ್ನೆಗಳನ್ನು ಮಾತ್ರ ಕೇಳಲಾಗುತ್ತದೆ.
- ಲಿಖಿತ ಪರೀಕ್ಷೆಯಲ್ಲಿ ಒಟ್ಟು 25 ಪ್ರಶ್ನೆಗಳನ್ನು ಕೇಳಲಾಗುತ್ತದೆ. 25ನೇ ಪ್ರಶ್ನೆಗಳಿಗೆ ಒಟ್ಟು ನೂರು ಅಂಕವನ್ನು ನಿಗದಿಪಡಿಸುತ್ತಾರೆ. ಅಭ್ಯರ್ಥಿಗಳು ಕನಿಷ್ಠ 60 ಅಂಕಗಳನ್ನು ಆದರೂ ಪಡೆಯಬೇಕು. ನೀಡಿರುವ ಕನಿಷ್ಠ ಅಂಕದ ಮೇಲೆ ಇರುವ ಅಭ್ಯರ್ಥಿಗಳನ್ನು ಮಾತ್ರ ಕೊನೆಯ ಹಂತಕ್ಕೆ ಆಯ್ಕೆ ಮಾಡಲಾಗುವುದು.
- ನೇರ ಸಂದರ್ಶನದಲ್ಲಿ ಅಭ್ಯರ್ಥಿಗಳಿಗೆ ವಾಹನ ರಸ್ತೆ ಸಾರಿಗೆ ಮತ್ತು ವೈಯಕ್ತಿಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ನೀಡಿದ ಪ್ರದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Conclusion :
ಈ ಲೇಖನದಲ್ಲಿ ನಾವು ಕೆಎಸ್ಆರ್ಟಿಸಿ ನೇಮಕಾತಿಯ ಹೊಸ ನೋಟಿಫಿಕೇಶನ್ ಬಗ್ಗೆ ಮಾಹಿತಿಯನ್ನು ನೀಡಿದ್ದೇವೆ. ಸಂಸ್ಥೆಯು ಶೀಘ್ರದಲ್ಲಿಯೇ ಅಧಿಕೃತವಾಗಿ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಲಿದೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ, ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ. ನಮ್ಮ ವೆಬ್ ಸೈಟ್ ನಲ್ಲಿ ಪ್ರತಿದಿನ ಕರ್ನಾಟಕ ಸರ್ಕಾರಿ ಹುದ್ದೆ, ಸೆಂಟ್ರಲ್ ಗೋರ್ಮೆಂಟ್ ಜಾಬ್ಸ್ ಮುಂತಾದ ಜಾಬ್ ಅಪ್ಡೇಟ್ಗಳನ್ನು ನೀಡುತ್ತೇವೆ ಧನ್ಯವಾದಗಳು.