Join Whatsapp Group

Join Telegram Group

SSC recruitment – SSC ನೇಮಕಾತಿ 2022

SSC recruitment – SSC ನೇಮಕಾತಿ 2022

SSC recruitment – SSC ನೇಮಕಾತಿ 2022 ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಂಡಿಯಾ ಬಿಡುಗಡೆ ಮಾಡಿದ ಹೊಸ ಅಧಿಸೂಚನೆಯ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ಕೇಂದ್ರ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್ ಹಲವುದ್ದೆಗಳಿಗೆ ನೇಮಕಾತಿಯನ್ನು ಆರಂಭ ಮಾಡಿದೆ. ಆನ್ಲೈನ್ ಮೂಲಕ 4,500 ಅಧಿಕಾರಿ ಹುದ್ದೆಗಳಿಗೆ ನೇಮಕಾತಿಯನ್ನು ಕರೆದಿದ್ದಾರೆ.

ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಸ್ಟಾಪ್ ಸೆಲೆಕ್ಷನ್ ಕಮಿಷನ್ ಅಧಿಕೃತ ಅಧಿಸೂಚನೆಯ ಪ್ರಕಾರ ಪಿಯುಸಿ ಶಿಕ್ಷಣ ಮುಗಿಸಿದ ಅಭ್ಯರ್ಥಿಗಳನ್ನು ಅರ್ಜಿಗಳನ್ನು ಸಲ್ಲಿಸಬಹುದು. ಆನ್ಲೈನ್ ನಲ್ಲಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಜನವರಿ 4 ಆಗಿರುತ್ತದೆ. ಈ ದಿನಾಂಕದ ಮುನ್ನತ ಮಾರ್ಜಿಗಳನ್ನು ಸಲ್ಲಿಸಬಹುದು.

ಸ್ಟಾಫ್ ಸೆಲೆಕ್ಷನ್ ಕಮಿಷನ್ ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು

ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಂಡಿಯಾ ಬಿಡುಗಡೆ ಮಾಡಿದ ಅಧಿಕೃತ ನೋಟಿಫಿಕೇಶನ್ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. 12ನೇ ತರಗತಿ ಶಿಕ್ಷಣವನ್ನು ಉತ್ತಮ ಅಂಕ ದೊಂದಿಗೆ ಪೂರ್ಣಗೊಳಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇರುತ್ತದೆ. ಅಂತಹ ವ್ಯಕ್ತಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಶಿಕ್ಷಣದ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯ ಪಿಡಿಎಫ್ ಅನ್ನು ನೋಡಬಹುದು.

ಅರ್ಜಿ ಸಲ್ಲಿಸಲು ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು

ಸ್ಟಾಪ್ ಸೆಲೆಕ್ಷನ್ ಕಮಿಷನ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ಅಧಿಕೃತ ಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಸರಿಯಾಗಿ ವಯಸ್ಸಿನ ಮಿತಿಯನ್ನು ನೋಡಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 1 2022 ದಿನಾಂಕದಂದು ಕನಿಷ್ಠ 18 ವರ್ಷದಿಂದ ಗರಿಷ್ಠ 27 ವರ್ಷಗಳ ವಯಸ್ಸಿನ ಮಿತಿಯಲ್ಲಿರುವವರು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ವಯಸ್ಸಿನ ಮಿತಿಯ ಮಾಹಿತಿಯನ್ನು ಸರಿಯಾಗಿ ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸುವುದು ಉತ್ತಮ.

ನೀಡಲಾಗಿರುವ ವಯೋಮಿತಿ ಸಡಿಲಿಕೆ ಮಾಹಿತಿಗಳು

SSC recruitment – SSC ನೇಮಕಾತಿ 2022 ಸ್ಟಾಪ್ ಸೆಲೆಕ್ಷನ್ ಕಮಿಷನ್ ಅಧಿಕೃತ ಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ಕಲ್ಪಿಸಲಾಗಿದೆ. ವಿವಿಧ ಕೆಟಗರಿಯಲ್ಲಿರುವ ಅಭ್ಯರ್ಥಿಗಳಿಗೆ ವಿವಿಧ ರೀತಿಯ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಇದರ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ ನೋಡಿ. ಮೊದಲಿಗೆ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ಕಲ್ಪಿಸಲಾಗಿದೆ. ಇನ್ನು ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಇನ್ನು ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ಕಲ್ಪಿಸಲಾಗಿದೆ. ಆದ್ದರಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇದರ ಲಾಭವನ್ನು ಪಡೆದು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಅನ್ನು ಭೇಟಿ ನೀಡಬಹುದು.

ನೇಮಕಾತಿಯ ಅರ್ಜಿ ಶುಲ್ಕದ ಮಾಹಿತಿಗಳು

ಸ್ಟಾಫ್ ಸೆಲೆಕ್ಷನ್ ಕಮಿಷನ್ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವಾಗ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ ಇದರ ಬಗ್ಗೆ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ ನೋಡಿ. ಮೊದಲಿಗೆ ಎಸ್ ಸಿ, ಎಸ್ ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಸೈನಿಕರಿಗೆ ಮತ್ತು ಮಹಿಳೆಯರಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ವಿಧಿಸಿಲ್ಲ. ಈ ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿ ಶುಲ್ಕವನ್ನು ಪಾವತಿ ಮಾಡದೆ ತಮ್ಮರ್ಜಿಗಳನ್ನು ಸಲ್ಲಿಸಬಹುದಾಗಿದೆ. ಇನ್ನು ಉಳಿದಿಲ್ಲ ಅಭ್ಯರ್ಥಿಗಳಿಗೆ ಕನಿಷ್ಠ ನೂರು ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಈ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ಸ್ಟಾಪ್ ಸೆಲೆಕ್ಷನ್ ಕಮಿಷನ್ ನೇಮಕಾತಿಯ ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು

ಈ ಮೇಲೆ ನೀಡಲಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಮೊದಲಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಮೊದಲನೆಯ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಮೊದಲು ನಡೆಸುವ ಲಿಖಿತ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಅಭ್ಯರ್ಥಿಗಳನ್ನು ಎರಡನೆಯ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ. ಎರಡನೇ ಹಂತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕೌಶಲ್ಯ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಮುಂದಿನ ಹಂತದಲ್ಲಿ ಟೈಪಿಂಗ್ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಮೂರು ಹಂತದಲ್ಲಿ ಪಾಸ್ ಆದ ಅಭ್ಯರ್ಥಿಗಳನ್ನು ಅವರ ದಾಖಲೆಗಳನ್ನು ಪರಿಶೀಲಿಸಿ ಸಂಸ್ಥೆಯು ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ ನೇಮಕಾತಿಯನ್ನು ನಡೆಸಲಾಗುತ್ತದೆ. ಆದ್ದರಿಂದ ಲಿಖಿತ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುವುದು ಉತ್ತಮ.

BEL recruitment – BEL ನೇಮಕಾತಿ 2022

ಹೊಸ ನೇಮಕಾತಿಯ ವೇತನದ ವಿವರಗಳು

ವಿವಿಧ ಹುದ್ದೆಗಳಿಗೆ ವಿವಿಧ ರೀತಿಯ ವೇತನವನ್ನು ನೀಡಲಾಗುತ್ತದೆ. ಮೊದಲಿಗೆ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕನಿಷ್ಠ 19,000 ದಿಂದ ಗರಿಷ್ಠ 63 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಇನ್ನು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25000ಗಳ ವೇತನವನ್ನು ನೀಡಲಾಗುವುದು. ಇನ್ನೂ ಡೇಟಾ ಎಂಟ್ರಿ ಆಪರೇಟರ್ ಗ್ರೇಡ್ ಎ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗರಿಷ್ಠ 81 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ವೇತನದ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ಸೂಚನೆಯನ್ನು ಪರಿಶೀಲಿಸಿ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು

ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಂಡಿಯಾ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆನ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಲು ಇರುವ ಕೊನೆಯ ದಿನಾಂಕ ಜನವರಿ 4 ಆಗಿರುತ್ತದೆ ಮತ್ತು ಆಫ್ ಲೈನ್ ಮೂಲಕ ಚಲನ್ ಕಟ್ಟಲು ಇರುವ ಕೊನೆಯ ದಿನಾಂಕ ಜನವರಿ 4 ಆಗಿರುತ್ತದೆ. ಇನ್ನು ಅರ್ಜಿ ಶುಲ್ಕ ಪಾವತಿ ಮಾಡಲು ಇರುವ ಕೊನೆಯ ದಿನಾಂಕ ಜನವರಿ 5 ಆಗಿರುತ್ತದೆ. ಈ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಅಪೂರ್ಣ ಅರ್ಜಿಗಳೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಿ.

Conclusion : SSC recruitment – SSC ನೇಮಕಾತಿ 2022

ಈ ಲೇಖನದಲ್ಲಿ ನಾವು ಸ್ಟಾಪ್ ಸೆಲೆಕ್ಷನ್ ಕಮಿಷನ್ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.

Leave a Comment